ಉದಯವಾಹಿನಿ, ಕೋಲ್ಕತ್ತಾ: ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ವೇಳೆ ಮಹಿಳೆಯರ ಹೆಸರು ಕೈಬಿಟ್ಟಿದ್ದರೆ ತಾಯಂದಿರು, ಸೋದರಿಯರು ಅಡುಗೆ ಉಪಕರಣಗಳನ್ನು ಹಿಡಿದುಕೊಂಡು ಸಿದ್ಧರಾಗಿರುವಂತೆ ತೃಣಮೂಲ ಕಾಂಗ್ರೆಸ್ ನಾಯಕಿ ) ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕರೆ ನೀಡಿದ್ದಾರೆ. ಮುಂದಿನ ವರ್ಷ ಚುನಾವಣೆಗೆ ಸಿದ್ಧವಾಗುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದ್ದು, ಇದರ ವಿರುದ್ಧ ರಾಜಕೀಯ ನಾಯಕರು ಆರೋಪ, ಪ್ರತ್ಯಾರೋಪಗಳು ಕೇಳಿ ಬರುತ್ತಿವೆ.
ಬಂಗಾಳದ ಕೃಷ್ಣನಗರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಮೂಲಕ ತಾಯಂದಿರು ಮತ್ತು ಸಹೋದರಿಯರ ಹಕ್ಕುಗಳನ್ನು ಕಸಿದುಕೊಳ್ಳುತ್ತೀರಾ ಎಂದು ಪ್ರಶ್ನಿಸಿರುವ ಅವರು, ಚುನಾವಣೆಯ ಸಮಯದಲ್ಲಿ ದೆಹಲಿಯಿಂದ ಪೊಲೀಸರನ್ನು ಕರೆತಂದು ಮಹಿಳೆಯರನ್ನು ಬೆದರಿಸಲಾಗುತ್ತಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟರೆ ಯಾವ ಉಪಕರಣ ನಿಮ್ಮ ಬಳಿ ಇದೆಯೋ ಅದನ್ನು ಹಿಡಿದು ಸಿದ್ದರಾಗಿ. ಮಹಿಳೆಯರು ಎದುರು ನಿಂತು ಹೋರಾಡಿದರೆ ಪುರುಷರು ಅವರ ಹಿಂದೆ ಇರುತ್ತಾರೆ ಎಂದು ಅವರು ಹೇಳಿದರು.
ಬಿಜೆಪಿಯು ಮಹಿಳೆಯರು ಎಷ್ಟು ಶಕ್ತಿಶಾಲಿಯಾಗಿದ್ದರೆ ಎಂದು ನೋಡಲು ಬಯಸುತ್ತಿದ್ದಾರೆ. ಕೋಮುವಾದದಲ್ಲಿ ನನಗೆ ನಂಬಿಕೆ ಇಲ್ಲ. ಜಾತ್ಯತೀತತೆಯನ್ನು ನಂಬುತ್ತೇನೆ. ಚುನಾವಣೆ ಬಂದಾಗ ಬಿಜೆಪಿಯು ಹಣ, ಇತರ ರಾಜ್ಯಗಳಿಂದ ಜನರನ್ನು ಕರೆತಂದು ಇಲ್ಲಿನ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
