ಉದಯವಾಹಿನಿ, ನವದೆಹಲಿ: ಪೋರ್ಟ್ ಬ್ಲೇರ್‌ನಲ್ಲಿರುವ ವೀರ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.
ಸುಮಾರು ₹710 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಸೌಲಭ್ಯವು ಕೇಂದ್ರಾಡಳಿತ ಪ್ರದೇಶವಾದ ದ್ವೀಪಕ್ಕೆ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
ಟರ್ಮಿನಲ್ ಕಟ್ಟಡವನ್ನು ಸುಮಾರು 40,800 ಚದರ ಮೀಟರ್‌ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. ವಾರ್ಷಿಕವಾಗಿ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ₹80 ಕೋಟಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್‌ಬಸ್ -321 ಮಾದರಿಯ ವಿಮಾನಗಳಿಗೆ ಸೂಕ್ತವಾದ ರನ್‌ವೇ ಅನ್ನು ಸಹ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಒಂದೇ ಬಾರಿಗೆ 10 ವಿಮಾನಗಳನ್ನು ನಿಲ್ಲಿಸಬಹುದಾಗಿದೆ ಎಂದು ಪಿಎಂಒ ವಿವರಿಸಿದೆ.

Leave a Reply

Your email address will not be published. Required fields are marked *

error: Content is protected !!