ಉದಯವಾಹಿನಿ, ದೇಹಕ್ಕೆ ಪ್ರತಿಯೊಂದು ಪೋಷಕಾಂಶ ಕೂಡ ಬಹಳ ಮುಖ್ಯವಾಗುತ್ತದೆ. ಅವುಗಳಲ್ಲಿ ಸ್ವಲ್ಪ ಕೊರತೆಯಾದರೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದರಲ್ಲಿ ಸಂಶಯವಿಲ್ಲ. ಅದರಲ್ಲಿಯೂ ದೇಹಕ್ಕೆ ಬಹಳ ಅಗತ್ಯವಾದ ವಿಟಮಿನ್ ಎಂದರೆ ಅದು ಬಿ 12 ಇದನ್ನು ದೇಹ ಸ್ವಂತವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ ಈ ವಿಟಮಿನ್ ಗಳನ್ನು ಆಹಾರ ಮೂಲಗಳಿಂದ ಪಡೆಯಬೇಕಾಗುತ್ತದೆ. ಇದು ಸಸ್ಯಾಹಾರಿ ಆಹಾರಗಳಿಂದ ಸಿಗುವುದು ಬಹಳ ಕಡಿಮೆಯಾದರೂ ಕೂಡ ಕೆಲವು ಸೊಪ್ಪುಗಳು ಈ ವಿಟಮಿನ್ ಕೊರತೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಅವು ಯಾವುವು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿಯಿರಿ.

ನುಗ್ಗೆ ಸೊಪ್ಪು:
ಸಾಮಾನ್ಯವಾಗಿ ಈ ಎಲೆಗಳು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದ್ದು ವಿಟಮಿನ್ ಎ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ನಾರಿನಂಶದಿಂದ ಸಮೃದ್ಧವಾಗಿವೆ. ಇವುಗಳ ಸೇವನೆಯಿಂದ ದೇಹದ ದೌರ್ಬಲ್ಯ ನಿವಾರಣೆಯಾಗಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗೆ ಮುಕ್ತಿ ಸಿಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಪಾಲಕ್:
ಈ ಸೊಪ್ಪಿನ ಸೇವನೆಯಿಂದ ವಿಟಮಿನ್ ಬಿ 12 ಸಿಗುತ್ತದೆ. ಅಷ್ಟೇ ಅಲ್ಲ, ಇದು ಕಬ್ಬಿಣ ಮತ್ತು ಫೋಲೇಟ್‌ನ ಉತ್ತಮ ಮೂಲವಾಗಿದ್ದು ನಿಯಮಿತವಾಗಿ ಸೇರಿಸಿಕೊಳ್ಳುವುದರಿಂದ ಆಯಾಸ ಮತ್ತು ಆಲಸ್ಯವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹರಿವೆ:
ಚಳಿಗಾಲದಲ್ಲಿ ಹರಿವೆಯ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಈ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿದ್ದು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ವಿಟಮಿನ್ ಬಿ 12 ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಕರಿಬೇವು:
ದಿನನಿತ್ಯ ಬಳಸುವ ಕರಿಬೇವು ವಿಟಮಿನ್ ಬಿ 12 ನ ಉತ್ತಮ ಮೂಲವಾಗಿದೆ. ಇವುಗಳಲ್ಲಿ ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಬಿ 12 ಅನ್ನು ಹೊಂದಿದ್ದು ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

Leave a Reply

Your email address will not be published. Required fields are marked *

error: Content is protected !!