ಉದಯವಾಹಿನಿ, ಬೆಂಗಳೂರು: ಬಿಸಿಯೂಟದ ಕಾರ್ಯಕರ್ತರು ಬಳೆ ತೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರ ತಲೆ ಖಾಲಿ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದರಿ ಆದೇಶ ರಾಜ್ಯಸರ್ಕಾರದ್ದಲ್ಲ. ಆದರೂ ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಆದೇಶ ಹೊರಡಿಸಿದೆ. ರಾಜ್ಯಸರ್ಕಾರ ಅದನ್ನು ಪಾಲನೆ ಮಾಡಿದೆ ಎಂದು ಅವರು ಪುನರುಚ್ಚರಿಸಿದರು. ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ವಿಷಯದಲ್ಲಿ ಹಿಂದು, ಮುಸ್ಲಿಂ ಎಂದು ಲೆಕ್ಕ ಹಾಕುವುದಿಲ್ಲ. ಬಿಜೆಪಿಯವರು ಹಿಂದು, ಹಿಂದು ಎಂದು ಹೇಳಿಕೊಂಡು ದೇಶಕ್ಕೆ ಮೂರು ನಾಮ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೂಟ್ಟೆಗಳನ್ನು ಖರೀದಿ ಮಾಡಲು ಸ್ಥಳೀಯ ಶಾಲಾಭಿವೃ
ದ್ಧಿ ಸಮಿತಿಗಳಿಗೆ ಆದೇಶ ನೀಡಲಾಗಿದೆ. ಕಳಪೆ ಮಟ್ಟ ಪ್ರಕರಣದಲ್ಲಿ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಹೇಳಿದರು.
