ಉದಯವಾಹಿನಿ, ವಾಷಿಂಗ್ಟನ್: ಅಮೆರಿಕದ ರೋಡ್ ಐಲೆಂಡ್‌ನ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಶನಿವಾರ ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಅಂತಿಮ ಪರೀಕ್ಷೆಗೆ ಹಾಜರಾಗುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಶಂಕಿತನನ್ನು ಇನ್ನೂ ಬಂಧಿಸಲಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆಂದು ಮೇಯರ್ ಸ್ಮೈಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್ ಶಾಲೆ ಮತ್ತು ಭೌತಶಾಸ್ತ್ರ ವಿಭಾಗವನ್ನು ಹೊಂದಿರುವ ಬರಸ್ ಮತ್ತು ಹಾಲಿ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ. ಎಂಜಿನಿಯರಿಂಗ್ ಪರೀಕ್ಷೆಗಳು ನಡೆಯುತ್ತಿರುವಾಗ ಶಂಕಿತನು ಗುಂಡಿನ ದಾಳಿ ನಡೆಸಿದ್ದಾನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಶ್ವೇತಭವನದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಟ್ರಂಪ್, ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
