ಉದಯವಾಹಿನಿ, ಮಾಸ್ಕೊ: ರಷ್ಯಾ ಸೇನೆಯು ಉಕ್ರೇನ್‌ನ ಕೈಗಾರಿಕಾ ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ಹೈಪರ್‌ಸಾನಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದೆ.’ಕಿನ್‌ಝಾಲ್ ಹೈಪರ್‌ಸಾನಿಕ್ ಕ್ಷಿಪಣಿಗಳನ್ನು ಬಳಸಿ ಉಕ್ರೇನ್ ಸೇನೆ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಶುಕ್ರವಾರ ರಾತ್ರಿ ಭಾರಿ ದಾಳಿ ನಡೆಸಿದ್ದೇವೆ. ರಷ್ಯಾದ ನಾಗರಿಕರನ್ನು ಗುರಿಯಾಗಿಸಿ ಉಕ್ರೇನ್ ನಡೆಸಿದ ದಾಳಿಗೆ ಪ್ರತಿಯಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು’ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಶನಿವಾರ ತಿಳಿಸಿದೆ.ಇಬ್ಬರು ಸಾವು: ರಷ್ಯಾದ ನೈರುತ್ಯ ಭಾಗದಲ್ಲಿರುವ ಸರತೊವ್ ಪ್ರಾಂತ್ಯದ ಮೇಲೆ ಉಕ್ರೇನ್ ನಡೆಸಿದ ಡೋನ್ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಕ್ರೇನ್ ಹಾರಿಸಿದ 41 ಡೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾ ಸೇನೆ ಹೇಳಿದೆ.
