

ಉದಯವಾಹಿನಿ, ಯಾದಗಿರಿ: ಜಿಲ್ಲೆಯಲ್ಲಿ ಈ ಬಾರಿ ಬರದ ಛಾಯೆ ಆವರಿಸಿದ್ದು ಜೂನ್ ಹಾಗೂ ಜುಲೈ ತಿಂಗಳ 15 ದಿನಗಳು ಗತಿಸಿದರೂ ಆಗಬೇಕಿದ್ದ ಗರಿಷ್ಠ ಪ್ರಮಾಣದ ಮಳೆ ಇನ್ನೂ ಆಗಿಲ್ಲ. ಜಿಲ್ಲೆಯ ರೈತಾಪಿ ವರ್ಗ ಬಿತ್ತನೆ ಕಾರ್ಯ ಮಾಡದೆ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಈ ಕೂಡಲೇ ಜಿಲ್ಲೆಯನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಮಾದಿಗ ದಂಡೋರ MRPS ಸಮಿತಿ ಯಾದಗಿರಿ ಜಿಲ್ಲಾಧ್ಯಕ್ಷ ಕಾಶಪ್ಪ ಹೇಗ್ಗಣಗೇರಾ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂನ್ ತಿಂಗಳಿನಲ್ಲಿ ಮುಂಗಾರು ಮಳೆಯಾಗಬೇಕಿತ್ತು ಆದರೆ ಚೆಂಡ ಮಾರುತಗಳ ವೈಪರೀತ್ಯದಿಂದ ಇಲ್ಲಿಯವರೆಗೆ ಮಳೆ ಆಗಿರುವುದಿಲ್ಲ. ಜಿಲ್ಲೆಯ ಶೇ. 80% ರಷ್ಟು ರೈತರು ಬಿತ್ತನೆ ಕಾರ್ಯ ಕೈಗೊಂಡಿಲ್ಲ. ಮಳೆಯನ್ನು ನಂಬಿ ರೈತರು ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ಖರೀದಿ ಮಾಡಿದ್ದಾರೆ.ರೈತರು ದಿನಾಲು ಬೆಳಗ್ಗರಿದರೆ ಮುಗಿಲು ನೋಡುವ ಆಗಾಗಿದೆ ಇದರಿಂದ ಜಿಲ್ಲೆಯ ಕೃಷಿಕ ಸಮುದಾಯ ತೀವ್ರ ಆತಂಕದ ಸ್ಥಿತಿ ಎದುರಿಸುತ್ತಿದೆ. ರೈತ ಈ ದೇಶದ ಬೆನ್ನೆಲುಬು ಎನ್ನುತ್ತಾರೆ ಮಳೆರಾಯನ ಆಟದಿಂದ ರೈತ ಕುಗ್ಗಿಹೊಗಿದ್ದಾನೆ ಸರಕಾರ ರೈತನಿಗೆ ಬೆನ್ನೆಲುಬಾಗಿ ನಿಲ್ಲಬೇಕಿದ್ದೆ ಕೂಡಲೇ ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ಎಂದು ಅವರು ಆಗ್ರಹಿಸಿದರು
