ಉದಯವಾಹಿನಿ, ಬೆಳಗಾವಿ: ರಾಜ್ಯ ಚಳಿಗಾಲದ ಅಧಿವೇಶನದ ಅವಧಿ ಒಂದು ವಾರ ವಿಸ್ತರಿಸಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಡಿ. 8ರಿಂದ 19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯ ಮೊಟುಕುಗೊಂಡಿದೆ. ಹೀಗಾಗಿ ಅಧಿವೇಶನ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಹಳಷ್ಟು ವಿಷಯಗಳು ಬಾಕಿಯಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸ್ತುತ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ರಾಜೇಗೌಡ ಟಿ.ಟಿ ಅವರ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ರಾಮಲಿಂಗಾರೆಡ್ಡಿ ಅವರು ಉತ್ತರ ನೀಡಿದರು.ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಗೋಣಿಬೀಡು ಹೋಬಳಿ ಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!