ಉದಯವಾಹಿನಿ, ಕೋಲಾರ: ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸುಬ್ರಮಣಿ ಮೃತಪಟ್ಟ ನಂಗಲಿ ಪೊಲೀಸ್ ಠಾಣೆ ಮುಖ್ಯಪೇದೆ. ಭಾನುವಾರ ರಾತ್ರಿ ಸುಬ್ರಮಣಿ 112 ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸುಬ್ರಮಣಿ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
