
ಉದಯವಾಹಿನಿ, ರಾಂಚಿ : ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜಾರ್ಖಂಡ್‌ನಲ್ಲಿ ಬಾಂಬ್ ಸ್ಫೋಟಗೊಂಡು ಇಬ್ಬರು ಸಿಆರ್‌ಪಿಎಫ್ ಜವಾನರು ಗಾಯಗೊಂಡಿದ್ದಾರೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಾರಂಡಾ ಅರಣ್ಯದಲ್ಲಿ ಐಇಡಿ ಸ್ಫೋಟಗೊಂಡು ಎಲೈಟ್ ಕೋಬ್ರಾ ಬೆಟಾಲಿಯನ್‌ನ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ ಜವಾನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಛೋಟಾನಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಬಾ ಅರಣ್ಯ ಪ್ರದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶವನ್ನು ಮಾವೋವಾದಿಗಳ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಈ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಐಇಡಿಗಳನ್ನು ಇರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
