ಉದಯವಾಹಿನಿ, ಉತ್ತರಾಖಂಡ: ಗುಂಪು ಘರ್ಷಣೆಯ ವೇಳೆ ಚಾಕು ಇರಿತದಿಂದ ಓರ್ವ ಸಾವನ್ನಪ್ಪಿದ ಘಟನೆ ಉತ್ತರಾಖಂಡ್ ಪಟ್ಟಣದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದ್ದು, ಇದರಿಂದ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಉಧಮ್ ಸಿಂಗ್ ನಗರದ ಹಿರಿಯ ಪೊಲೀಸ್ ಅಧೀಕ್ಷಕ ಮಣಿಕಾಂತ್ ಮಿಶ್ರಾ, ಉತ್ತರಾಖಂಡ್ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಗುಂಪು ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ತುಷಾರ್ ಶರ್ಮಾ ಎಂಬಾತನನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನ ಇಬ್ಬರು ಸಹಚರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಹಾಶಿಮ್ ಮತ್ತು ಆತನ ಸಹಚರರು ಗಲಭೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ನೀಡಿರುವ ಸುಳಿವಿನ ಮೇರೆಗೆ ಪೊಲೀಸ್ ತಂಡವು ಝಂಝಾಟ್‌ನ ಇಟ್ಟಿಗೆ ಗೂಡು ಬಳಿ ಹಾಶಿಮ್‌ನಿಗೆ ಶರಣಾಗುವಂತೆ ಕೇಳಲಾಯಿತು. ಆದರೆ ಆತ ಮತ್ತು ಆತನ ಸಹಚರರು ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಇದರಿಂದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹರಿಸಿದ್ದಾರೆ. ಇದರಿಂದ ಗಾಯಗೊಂಡ ಆತನನ್ನು ಬಳಿಕ ಬಂಧಿಸಲಾಯಿತು ಎಂದು ಹೇಳಿದರು.
