
ಉದಯವಾಹಿನಿ, ನವದೆಹಲಿ: ಯಹೂದಿ ಹನುಕ್ಕಾ ಸಮಯದಲ್ಲಿ ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ ) ನಡೆದಿರುವ ಹಿನ್ನೆಲೆಯಲ್ಲಿ ಇದೀಗ ದೆಹಲಿ , ಮುಂಬೈ , ಬೆಂಗಳೂರು ಸೇರಿದಂತೆ ಭಾರತದ ಮಹಾನಗರಗಳಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ. ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನಡೆದ ಯಹೂದಿ ಹನುಕ್ಕಾ ಕಾರ್ಯಕ್ರಮದಲ್ಲಿ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿ ಹತ್ತು ಮಂದಿಯನ್ನು ಕೊಂದು ಹಾಕಿದ್ದಾರೆ. ಇವರಲ್ಲಿ ಮಕ್ಕಳು, ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ. ಈ ಘಟನೆಯಲ್ಲಿ 190ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಯಹೂದಿ ಹಬ್ಬದ ಹಿನ್ನೆಲೆಯಲ್ಲಿ ಇದೀಗ ದೆಹಲಿ, ಬೆಂಗಳೂರು ಮತ್ತು ಮುಂಬೈ ಸೇರಿದಂತೆ ಮಹಾನಗರಗಳಲ್ಲಿ ಭಯೋತ್ಪಾದಕ ದಾಳಿಯ ಬಗ್ಗೆ ಉನ್ನತ ಮಟ್ಟದ ಎಚ್ಚರಿಕೆಯನ್ನು ನೀಡಲಾಗಿದೆ.ಭಾರತದಲ್ಲಿ ಯಹೂದಿ ಹಬ್ಬ ಹನುಕ್ಕಾ ಮೇಲೆ ಭಯೋತ್ಪಾದಕ ದಾಳಿಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮಟ್ಟದ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳ ಮೇಲೆ ಭಯೋತ್ಪಾದಕ ಸಂಘಟನೆಗಳು ದಾಳಿಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂಬ ಗುಪ್ತಚರ ಮಾಹಿತಿ ತಿಳಿಸಿದೆ.
ಕ್ರಿಸ್ಮಸ್ ಗೆ ಮೊದಲು ಪ್ರಾರಂಭವಾಗುವ ಯಹೂದಿ ಹಬ್ಬ ಹನುಕ್ಕಾ ಭಾನುವಾರದಿಂದ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ. ಇದು ತುಂಬಾ ಗಂಭೀರ ವಿಷಯವಾದ್ದರಿಂದ ನಿರ್ದಿಷ್ಟ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
