ಉದಯವಾಹಿನಿ, ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ದೊಡ್ಮನೆ ಹುಡ್ಗಿ ಧನ್ಯ ರಾಮ್‌ಕುಮಾರ್ ನಟನೆಯ ಚೌಕಿದಾರ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಎರಡು ಹಾಡುಗಳಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಇದೀಗ ಚಿತ್ರತಂಡ ಇಷ್ಟ ಆದೆ ನೀನು ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಇಷ್ಟ ಆದೆ ನೀನು ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಒದಗಿಸುವುದರ ಜೊತೆಗೆ ಪೃಥ್ವಿ ಭಟ್ ಜೊತೆಗೂಡಿ ಧ್ವನಿಯಾಗಿದ್ದಾರೆ.
ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ ಬಂಡಿಯಪ್ಪ ಕಥೆ ಬರೆದು ಚೌಕಿದಾರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟಿ ಶ್ವೇತಾ, ಸುಧಾರಾಣಿ, ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
