
ಉದಯವಾಹಿನಿ , ಬಹುನಿರೀಕ್ಷಿತ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಿನಿ ಹರಾಜಿಗೆ ಇನ್ನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ಒಟ್ಟು 359 ಆಟಗಾರರು ಮಿನಿ ಹರಾಜಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಒಳಗಾಗಲಿದ್ದಾರೆ. ಹರಾಜಿನ ಪಟ್ಟಿಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸ್ಟಾರ್ ಆಟಗಾರರು ಇದ್ದಾರೆ. ಕ್ಯಾಮೆರಾನ್ ಗ್ರೀನ್ ಡೇವಿಡ್ ಮಿಲ್ಲರ್ ರವಿ ಬಿಷ್ಣೋಯ್, ಸ್ಟೀವನ್ ಸ್ಮಿತ್, ವೆಂಕಟೇಶ್ ಅಯ್ಯರ್ ಸೇರಿದಂತೆ ಹಲವು ಸ್ಟಾರ್‌ಗಳು ಮಿನಿ ಹರಾಜಿನ ಪ್ರಮುಖ ಆಕರ್ಷಣೆಯಾಗಿದೆ.
ಅಂದ ಹಾಗೆ ಕಳೆದ ಬಾರಿ ಮೆಗಾ ಹರಾಜು ನಡೆದಿತ್ತು. ಹಾಗಾಗಿ ಈ ಬಾರಿ ಮಿನಿ ಹರಾಜು ನಡೆಯಲಿದೆ. 2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಪ್ರಾಬಲ್ಯ ಸಾಧಿಸಿದ್ದರು. ಅವರು ಐಪಿಎಲ್ ಟೂರ್ನಿಯ ಇತಿಹಾಸದ ಅಂತ್ಯಂದ ದುಬಾರಿ ಆಟಗಾರ ಎನಿಸಿಕೊಂಡಿದ್ದರು. ಅಂದ ಹಾಗೆ ಇದೀಗ 2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿನಲ್ಲಿ ಅತ್ಯಂತ ದುಬಾರಿ ಮೊತ್ತ ಪಡೆದಿದ್ದ ಅಗ್ರ ಐವರು ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.
ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು 2016ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್ ವೃತ್ತಿ ಜೀವನವನ್ನು ಆರಂಭಿಸಿದ್ದರು. ನಂತರ 2021ರಲ್ಲಿ ಡಿಸಿಗೆ ನಾಯಕರಾಗಿ ಬಡ್ತಿ ಪಡೆದಿದ್ದರು. ಆದರೂ ಇವರ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರನ್ನು 2025ರ ಮೆಗಾ ಹರಾಜಿಗೆ ಬಿಡಲಾಗಿತ್ತು ಹಾಗೂ ಹರಾಜಿನಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ 27 ಕೋಟಿ ರು ಗಳಿಗೆ ಪಂತ್ ಅವರನ್ನು ಖರೀದಿಸಿತ್ತು. ಆ ಮೂಲಕ ಐಪಿಎಲ್ ಹರಾಜಿನಲ್ಲಿಯೇ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದರು.
