ಉದಯವಾಹಿನಿ, ಮುಂಬೈ : ವಕೀಲರೊಂದಿಗಿನ ಜಗಳದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಬಳಿ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಂಬೆ ಹೈಕೋರ್ಟ್ ಆವರಣದ ಹೊರಗೆ ಈ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ಮತ್ತು ಅಲ್ಲಿದ್ದ ಕೆಲವರು ತಕ್ಷಣ ಮಧ್ಯ ಪ್ರವೇಶಿಸಿ ಬೆಂಕಿಯನ್ನು ನಂದಿಸಿದರು. ಪ್ರಕಾಶ್ ಸಾವಂತ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ದಕ್ಷಿಣ ಮುಂಬೈಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಶೇ. 50ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಕರಾವಳಿ ಸಿಂಧುದುರ್ಗ ಜಿಲ್ಲೆಯ ಕಂಕವಲಿಯ ನಿವಾಸಿ ಸಾವಂತ್ ಮತ್ತು ವಕೀಲರ ನಡುವಿನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ವಿಚಾರದಲ್ಲಿ ಉಂಟಾದ ವಿವಾದವು ಈ ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಸಾವಂತ್ ವಕೀಲರೊಬ್ಬರಿಗೆ 80,000 ರೂ. ಪಾವತಿಸಿದ್ದಾರೆ ಎನ್ನಲಾಗಿದೆ. ಆದರೆ ವಕೀಲರು ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಆಜಾದ್ ಮೈದಾನ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಮಕ್ಕಳ ಕಳ್ಳತನದ ಆರೋಪ ಹೊರಿಸಿ ಗುಂಪೊಂದು ಮೂವರು ಸಾಧುಗಳನ್ನು ಕೋಲು ಮತ್ತು ಬೆಲ್ಟ್‌ಗಳಿಂದ ಕ್ರೂರವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ನಡೆದಿದೆ. ಇದರ ವಿಡಿಯೊ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡರು. ಪೊಲೀಸರು ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೊವನ್ನು ಆಧರಿಸಿ, ಪೊಲೀಸರು ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮಚ್ಲಿಶಹರ್ ನಿಲ್ದಾಣದ ಬಳಿ ಈ ಆಘಾತಕಾರಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!