ಉದಯವಾಹಿನಿ, ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಸೀಸನ್‌-19ರ ಮಿನಿ ಹರಾಜಿನಲ್ಲಿ 30 ಲಕ್ಷ ಮೂಲ ಬೆಲೆ ಹೊಂದಿದ್ದ ಜಮ್ಮ ಕಾಶ್ಮೀರದ ಅನ್‌ ಕ್ಯಾಪ್ಡ್‌ ಆಟಗಾರ ಆಕಿಬ್‌ ನಬಿ ದಾರ್‌ 8.4 ಕೋಟಿ ರು. ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪಾಲಾಗಿದ್ದಾರೆ. ಆ ಮೂಲಕ ಮೂಲ ಬೆಲೆಗಿಂತ ಅವರು 28 ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗಿದ್ದಾರೆ. ಆಕಿಬ್‌ ನಬಿ ದಾರ್‌ ಜಮ್ಮು ಕಾಶ್ಮೀರದ ವೇಗ್‌ ಬೌಲರ್‌ ಆಗಿದ್ದು, ಕೆಳ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಇದೇ ಮೊದಲ ಬಾರಿ ಐಪಿಎಲ್‌ ಪ್ರವೇಶಿಸಲಿರುವ ಅವರು ದೇಶಿ ಕ್ರಿಕೆಟ್‌ನಲ್ಲಿ ಜಮ್ಮು ಕಾಶ್ಮೀರ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಆಕಿಬ್‌ ನಬಿ ಜಮ್ಮು ಮತ್ತು ಕಾಶ್ಮೀರದ ಪರ ಇಲ್ಲಿಯವೆರೆಗೆ 36 ಪ್ರಥಮ ದರ್ಜೆ ಪಂದ್ಯಗಳು, 29 ಲಿಸ್ಟ್‌ ಎ ಮತ್ತು 34 ಟಿ20 ಪಂದ್ಯಗಳನ್ನಾಡಿದ್ದು, ಒಟ್ಟು 195 ವಿಕೆಟ್‌ ಕಬಳಿಸಿದ್ದಾರೆ. ಇನ್ನು 2024-25ರ ರಣಜಿ ಟ್ರೋಫಿಯಲ್ಲಿ 44 ವಿಕೆಟ್‌ ಪಡೆದು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಎರಡನೇ ಬೌಲರ್‌ ಎಂದೆನಿಸಿಕೊಂಡಿದ್ದಾರೆ. 2025ರ ದುಲೀಪ್‌ ಟ್ರೋಫಿಯಲ್ಲಿ ನಬಿ ಪೂರ್ವ ವಲಯದ ವಿರುದ್ಧದ ಪಂದ್ಯದಲ್ಲಿ ಸತತ ನಾಲ್ಕು ಎಸೆತಗಳಲ್ಲಿ 4 ವಿಕೆಟ್‌ ಕಬಳಿಸಿ ಟೂರ್ನಿಯಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು.

Leave a Reply

Your email address will not be published. Required fields are marked *

error: Content is protected !!