ಉದಯವಾಹಿನಿ, ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ.
ಇಂದು ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ.
ಒಂದು ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರು ಶ್ಯೂರಿಟಿ ನೀಡಲು ಒಪ್ಪಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಬೆಳ್ತಂಗಡಿಯಿಂದ ಶಿವಮೊಗ್ಗ ಜೈಲಿನತ್ತ ಮಲ್ಲಿಕಾ ಹಾಗೂ ರತ್ನ ತೆರಳಿದ್ದಾರೆ.ನ.24 ರಂದು 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ.
