ಉದಯವಾಹಿನಿ,
: ನನ್ನ ಕ್ಷೇತ್ರದಲ್ಲಿ ನನ್ನ ಜಿಲ್ಲೆಯ ಒಂದು ಪ್ರತಿಬೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಭಾಜನರಾಗಿರುವುದು ಬಹಳ ಹೆಮ್ಮೆಯ ವಿಷಯ. ಪ್ರತಿಭಾವಂತ ಮಂಜುನಾಥ ನಾಯಕ್‌ರವರ ಸಾಧನೆ ಮಹತ್ತರವಾದದ್ದು. ತಮ್ಮ ಸಾಧನೆಯ ಮೂಲಕ ತಮ್ಮ ತಂದೆತಾಯಿಗಳಿಗೆ, ಜಿಲ್ಲೆಗೆ ನಮ್ಮ ಭಾಗಕ್ಕೆ ಕೀರ್ತಿ ತಂದ ಇಂತಹ ಪ್ರತಿಭೆಗಳು ನಮ್ಮ ಜಿಲ್ಲೆಯಲ್ಲಿ ನನ್ನ ಕ್ಷೇತ್ರದಲ್ಲಿ ಇನ್ನಷ್ಟು ಹೊರಹೊಮ್ಮಲಿ. ಎಂದು ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜ ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂ¨sಕ್ಕೆ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದ ಅವರು ಯಾವುದಾದರೂ ಸಾಧನೆ ಮಾಡಬೇಕಾದರೆ ಪರಿಶ್ರಮ ಅತ್ಯವಶ್ಯ ಈ ನಿಟ್ಟಿನಲ್ಲಿ ಪ್ರತಿಭಾವಂತ ಮಂಜುನಾಥ ನಾಯಕ್‌ರವರ ಅವಿರತ ಪರಿಶ್ರವೇ ಈ ಸಾಧನೆಗೆ ಕಾರಣವಾಗಿದೆ. ಅದರಲ್ಲೂ ಕನ್ನಡ ಸಾಹಿತ್ಯ ಪರಷತ್ ಘಟಕದಿಂದ ಅಭಿನಂದನಾಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸದ ವಿಷಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೂಡ ಒಂದು ಭಾಗವಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಭಾಜನರಾಗಿರುವ ಕತೆಗಾರ ಮಂಜು ನಾಯಕ ಚಳ್ಳೂರು ಅವರಿಗೆ ಅಭಿನಂದನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರವಿವಾರ ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕ.ಸಾ.ಪ. ದಿಂದ ಪ್ರತಿಭಾಪುರಸ್ಕಾರ ನೀಡಿ ಗೌರವಿಸಿರುವುದು ಸಂತಸದ ವಿಷಯ. ಹಾಗೂ ಪಟ್ಟಣದಲ್ಲಿ ಸಾಹಿತ್ಯ ಭವನ ಹಾಗೂ ೧೦೦ ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ದಾನಿಗಳು ಭೂಮಿ ದಾನ ನೀಡಿದ್ದು ಸುಸಜ್ಜಿತ ಸಾಹಿತ್ಯ ಭವನ, ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.
ನAತರ ಕತೆಗಾರ ಮಂಜು ನಾಯಕ ರವರಿಗೆ, ಉದ್ಯಮಿ ಸಣ್ಣ ಸೂಗಪ್ಪ (ಎಲ್‌ವಿಟಿ)ಸಹೋದರರಿಗೆ, ಎಸ್‌ಎಸ್‌ಎಲ್‌ಸಿ, ಪಿಯು, ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ, ಚಾರ್ಟೆಡ್ ಅಕೌಂಟೆAಟ್ (ಸಿಎ), ನೀಟ್ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
