ಉದಯವಾಹಿನಿ, ಪುಣೆ: ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಕಳೆದ ಏಪ್ರಿಲ್ ತಿಂಗಳಾಂತ್ಯದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಯಾಗಿ ಮೇ 7ರಂದು ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೊದಲ ದಿನವೇ ಭಾರತೀಯ ವಾಯುಸೇನೆಗೆ ) ಭಾರಿ ಪ್ರಮಾಣದಲ್ಲಿ ಸೋಲುಂಟಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂದೂರ್ ನ ಮೊದಲ ದಿನವೇ ಭಾರತೀಯ ವಾಯುಸೇನೆ ಸೋತಿದೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂದೂರ್‌ನ ಮೊದಲ ದಿನವೇ ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಪಾಕಿಸ್ತಾನದಿಂದ ಹೊಡೆದುರುಳಿಸುವ ಸಾಧ್ಯತೆಯ ನಡುವೆಯೇ ಭಾರತೀಯ ವಾಯುಪಡೆಯ ಯುದ್ಧವಿಮಾನಗಳು ಸಂಪೂರ್ಣವಾಗಿ ನೆಲ ಕಚ್ಚಿವೆ ಎಂದು ಹೇಳಿದ್ದಾರೆ.
