ಉದಯವಾಹಿನಿ, ಪಾಟ್ನಾ: ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ ಎಳೆದು ವಿವಾದಕ್ಕೀಡಾದ ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಅವರ ಕೃತ್ಯವನ್ನು ಉತ್ತರಪ್ರದೇಶದ ಸಚಿವರೊಬ್ಬರು ಸಮರ್ಥಿಸಿಕೊಂಡಿದ್ದು ಮಾತ್ರವಲ್ಲ ಒಂದು ವೇಳೆ ನಿತೀಶ್ ಕುಮಾರ್ ಬೇರೆಡೆ ಮುಟ್ಟಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ. ಇದು ವಿವಾದವನ್ನು ಮತ್ತಷ್ಟು ಹೆಚ್ಚಿಸಿದೆ. ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಸ್ಲಿಂ ಮಹಿಳೆಯ ಹಿಜಾಬ್ ತೆಗೆದಿರುವುದನ್ನು ಉತ್ತರ ಪ್ರದೇಶ ಸಚಿವ ಸಂಜಯ್ ನಿಶಾದ್ ಸಮರ್ಥಿಸಿಕೊಂಡಿದ್ದಾರೆ.
ಅಸಭ್ಯ ಮತ್ತು ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿ ವಿವಾದ ಉಂಟು ಮಾಡುವ ಉತ್ತರ ಪ್ರದೇಶ ಸಚಿವ ಸಂಜಯ್ ನಿಶಾದ್ ಇದೀಗ ಸಂದರ್ಶನವೊಂದರಲ್ಲಿ ನಿತೀಶ್ ಕುಮಾರ್ ಮಹಿಳೆಯೊಬ್ಬರ ಹಿಜಾಬ್ ಅನ್ನು ಮುಟ್ಟಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ಅವರು ಬೇರೆಡೆ ಮುಟ್ಟಿದ್ದರೆ ಏನಾಗುತ್ತಿತ್ತು ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ಅವರ ಈ ಹೇಳಿಕೆಗಳು ಇದೀಗ ವಿವಾದವನ್ನು ಮತ್ತಷ್ಟು ಹೆಚ್ಚಿಸಿದೆ.
10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರು ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ಸೋಮವಾರ ನೇಮಕಾತಿ ಪತ್ರಗಳನ್ನು ವಿತರಿಸುತ್ತಿದ್ದರು. ಈ ವೇಳೆ ಅವರು ನೇಮಕಾತಿ ಪತ್ರ ಸ್ವೀಕರಿಸಲು ಬಂದ ಮುಸ್ಲಿಂ ಮಹಿಳೆಗೆ ಮುಖ ತೋರಿಸುವಂತೆ ಹೇಳಿ ಹಿಜಾಬ್ ಎಳೆದಿದ್ದಾರೆ. ಈ ವೇಳೆ ಅವರ ಪಕ್ಕದಲ್ಲೇ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ಇದ್ದರು. ಅವರು ನಿತೀಶ್ ಕುಮಾರ್ ಅವರನ್ನು ತಡೆಯಲು ಪ್ರಯತ್ನಿಸಿದ್ದು ಕೂಡ ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ.
