ಉದಯವಾಹಿನಿ,  ಪ್ರಧಾನಿ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯ ಗೌರವ ದೊರೆತಿದೆ. ಮಂಗಳವಾರ ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು.
ಇಥಿಯೋಪಿಯಾ ರಾಜದಾನಿ ಅಡಿಸ್ ಅಬಬಾದ ಅಂತರರಾಷ್ಟ್ರೀಯ ಕನ್ವೆನ್ನನ್ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಪ್ರಶಸ್ತಿಯನ್ನು ಪಡೆದ ಇತರೆ ದೇಶದ ಮೊದಲ ನಾಯಕ ಪ್ರಧಾನಿ ಮೋದಿ ಎಂದು ವರದಿ ತಿಳಿಸಿದೆ.
ನನಗೆ ಇಥಿಯೋಪಿಯಾದ ಅತ್ಯುನ್ನತ ‘ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಲಭಿಸಿದ್ದು, ಇದನ್ನು ನಾನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ಮೋದಿ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!