ಉದಯವಾಹಿನಿ, ರಾಮನಗರ: ಪ್ರೀತಿ ಹೆಸರಿನಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್ ರೇಪ್ ಎಸಗಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿರುವ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಕಾಸ್, ಪ್ರಶಾಂತ್, ಚೇತನ್ ಬಂಧಿತ ಆರೋಪಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಮುಕರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು. ಅಕ್ಟೋಬರ್ ತಿಂಗಳಲ್ಲಿ ಘಟನೆ ನಡೆದಿತ್ತು. ಆದ್ರೆ ಈ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸಂತ್ರಸ್ತೆ ತಡವಾಗಿ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ಪ್ರತಿಷ್ಠಿತ ಕಾಲೇಜುವೊಂದರಲ್ಲಿ 2ನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತೆ ನಿನ್ನೆಯಷ್ಟೇ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರು ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಕಾಮುಕರನ್ನ ಬಂಧಿಸಿದ್ದಾರೆ.
ಪ್ರೀತಿ ಹೆಸರಿನಲ್ಲಿ ವಂಚನೆ: ಬಂಧಿತ ಮೂವರಲ್ಲಿ ಆರೋಪಿ ವಿಕಾಸ್ ಯುವತಿಯ ಪ್ರಿಯಕರನೇ ಆಗಿದ್ದಾನೆ. ಬೆಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯನ್ನ ಪ್ರೀತಿಸುತ್ತಿದ್ದ. ಕೊನೆಗೆ ಪ್ರೀತಿ ಹೆಸರಿನಲ್ಲೇ ವಂಚಿಸಿ, ಸ್ನೇಹಿತರ ಜೊತೆಗೂಡಿ ಅತ್ಯಾಚಾರ ಎಸಗಿದ್ದಾನೆ ಅಂತ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
