ಉದಯವಾಹಿನಿ, ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪುನರುಚ್ಚರಿಸಿದರು.
ನವದೆಹಲಿಯಲ್ಲಿ ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಭಗವದ್ಗೀತೆಯನ್ನು ಬೋಧಿಸಬೇಕು ಎಂದು ನಾನು ಹೇಳಿದ್ದು ರಾಜಕೀಯ ಉದ್ದೇಶ ಅಥವಾ ಯಾವುದೇ ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ. ಉತ್ತಮ ಸಮಾಜ ನಿರ್ಮಾಣ ಮಾಡುವ ಅಗತ್ಯದ ದೃಷ್ಟಿಯಿಂದ ಹೇಳಿದ್ದೇನೆ ಎಂದು ಒತ್ತಿ ಹೇಳಿದರು.
ಭಗವದ್ಗೀತೆಯ ಉದಾತ್ತ, ಶ್ರೇಷ್ಠ ಮೌಲ್ಯಗಳ ಬಗ್ಗೆ ಹೊಸದಾಗಿ ತಿಳಿಹೇಳುವ ಅಗತ್ಯವಿಲ್ಲ. ಆದರೆ ಸಮಾಜದಲ್ಲಿ ನೈತಿಕ ಮೌಲ್ಯಗಳು ಅಧಿಃಪತನ ಆಗುತ್ತಿರುವ ಸಂದರ್ಭದಲ್ಲಿ ಗೀತೆಯ ಅಗತ್ಯ ಇನ್ನೂ ಹೆಚ್ಚಿದೆ. ಮಾನವ ಕುಲಕ್ಕೆ ಕೃಷ್ಣನ ಉಪದೇಶವು ದಾರಿದೀಪವಾಗಿದೆ. ಹೀಗಾಗಿ ಮಕ್ಕಳಿಗೆ ಬೋಧಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದೇನೆ. ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವಂತೆ ಕೋರಿ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರವನ್ನು ಕೂಡ ಬರೆದಿದ್ದೇನೆ. ಅದನ್ನೇ ಕೆಲವರು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ನುಡಿದರು.

 

Leave a Reply

Your email address will not be published. Required fields are marked *

error: Content is protected !!