ಉದಯವಾಹಿನಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು.
ಮಾಜಿ ಪ್ರಧಾನಿ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ. ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ. ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ. ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಕೃಷಿ ಸಚಿವರ ಗಮನಸೆಳೆದರು.
