ಉದಯವಾಹಿನಿ, ಭೋಪಾಲ್‌: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿದ್ದು, ತನಿಖೆಗೂ ಆದೇಶಿಸಿದೆ.
ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ 189 ಯೂನಿಟ್‌ ರಕ್ತವನ್ನ ಸಂಗ್ರಹಿಸಲಾಗಿತ್ತು. ಈ ರಕ್ತವನ್ನ 150ಕ್ಕೂ ಹೆಚ್ಚು ದಾನಿಗಳಿಂದ ಈ ರಕ್ತ ಪಡೆಯಲಾಗಿತ್ತು. ಆದ್ರೆ ರಕ್ತಪರೀಕ್ಷೆ ಸಂದರ್ಭದಲ್ಲಿ ಉಂಟಾದ ವೈಫಲ್ಯದಿಂದ ಐವರು ಮಕ್ಕಳಿಗೆ ಸೋಂಕು ತಗುಲಿದೆ. ದಾನ ಪಡೆದ ರಕ್ತವನ್ನ ಮಕ್ಕಳಿಗೆ ನೀಡಿದ ಬಳಿಕ ಸೋಂಕು ತಗುಲಿದೆ. ಇದು ಮಧ್ಯಪ್ರದೇಶದಲ್ಲಿ ) ಇತ್ತೀಚೆಗೆ ಕಂಡ ಅತಿದೊಡ್ಡ ಆರೋಗ್ಯ ವೈಫಲ್ಯವಾಗಿದೆ.
ಘಟನೆ ಸಂಬಂಧ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ. ಅಲ್ಲದೇ ಸೋಂಕಿತರ ರಕ್ತವನ್ನ ಮಕ್ಕಳಿಗೆ ನೀಡಲಾಗಿದೆ ಎಂಬ ಪ್ರಕರಣದ ತನಿಖೆಗೆ ರಚಿಸಲಾಗಿರುವ ಸಮಿತಿ ಪ್ರಾಥಮಿಕ ವರದಿಯ ಆಧಾರದಲ್ಲಿ ಗುರುವಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!