ಉದಯವಾಹಿನಿ , ಹಾಸನ: ಹಠಾತ್ ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಶಿಕ್ಷಕಿ. ಇದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕಿಯಾಗಿದ್ದರು. ಅವರು ನಿವೃತ್ತಿಯಾಗಲು ಇನ್ನೆರಡು ವರ್ಷ ಮಾತ್ರ ಬಾಕಿಯಿತ್ತು. ಇಂದು ( ಮುಂಜಾನೆ ಮನೆಯಲ್ಲಿ ಮಲಗಿದ್ದ ವೇಳೆ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇನ್ನೊಂದೆಡೆ ಹೊಳೆನರಸೀಪುರದ ಹಳ್ಳಿಮೈಸೂರು ಹೋಬಳಿ ಗುಲಗಂಜಿಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಹಠಾತ್ ಹೃದಯಾಘಾತದಿಂದ ನಿಧನನಾಗಿದ್ದಾನೆ. ಮೃತರನ್ನು ಪರಮೇಶ್ (35) ಎಂದು ಗುರುತಿಸಲಾಗಿದೆ. ಅವರು ಪಟ್ಟಣದ ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದರು.
