ಉದಯವಾಹಿನಿ , ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಪಾಲಿಕೆ ಜಾಗವನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ 200 ಮನೆಗಳನ್ನ ಜೆಸಿಬಿಗಳ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. 6 ಜೆಸಿಬಿ, 300 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುತ್ತಿದೆ.
ಕಾರಣ ಏನು?: ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿರುವ ಈ ಗೋಮಾಳ ಜಾಗವನ್ನ ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು. ಆದ್ರೆ ಜಾಗವನ್ನ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಲಾಗಿತ್ತು. ಹೀಗಾಗಿ ಒತ್ತುವರಿ ಮಾಡಿ ನಿರ್ಮಿಸಲಾಗಿರುವ 200 ಮನೆಗಳನ್ನ ನೆಲಸಮಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.
