ಉದಯವಾಹಿನಿ , ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದ್ರೆ, ಇನ್ಶುರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು ಎಂದು ವರದಿಗಳು ತಿಳಿಸಿವೆ.
ಸರ್ಕಾರಿ ಶಾಲೆಯೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿದ್ದ ಇ.ಪಿ ಗಣೇಸನ್ (56) ಕಳೆದ ಅಕ್ಟೋಬರ್‌ನಲ್ಲಿ ಪೋಥತುರ್ಪೇಟೆ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದರು. ಕುಟುಂಬಸ್ಥರು ಹಾವು ಕಡಿತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಹಾಗಾಗಿ ಪೊಲೀಸರು ಕೂಡ ಇದು ಆಕಸ್ಮಿಕ ಸಾವು ಅಂತ ಪ್ರಕರಣ ದಾಖಲಿಸಿಕೊಂಡಿದ್ದರು
