ಉದಯವಾಹಿನಿ,
: ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ವಿರೋದ ಪಕ್ಷಗಳು ಒಗ್ಗೂಡಿ ಹೋರಾಟ ಮಾಡುವ ಮಹಾ ಮೈತ್ರಿಗೆ ” ಇಂಡಿಯಾ ” ಎಂದು ಹೆಸರಿಟ್ಟು ಅದರಡಿ ಹೋರಾಟ ಮಾಡಲು ನಿರ್ದರಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ತಿಳಿಸಿದ್ದಾರೆ.ಇಂಡಿಯಾ – ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್‌ಕ್ಲೂಸೀವ್ ಅಲೆಯೆನ್ಸ್ ಅಂದರೆ ಭಾರತೀಯ ರಾಷ್ಟ್ರೀಯ ಅಭಿವೃದ್ದಿ ಸಮಗ್ರ ಒಕ್ಕೂಟ ಎಂದು ಹೆಸರಿಡಲಾಗಿದೆ ಎಂದು ಹೇಳಿದ್ದಾರೆ.ಮುಂಬರುವ ಲೋಕಭೆ ಚುನಾವಣೆಯ ಹಿನ್ನೆಲ೩ಯಲ್ಲಿ ನಗರದಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ 26 ನಾಯಕರ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾಗಾಂಧಿ ಸೇರಿದಂತೆ ವಿವಿಧ ಪಕ್ಷಗಳ 26 ಪಕ್ಷಗಳ ನಾಯಕರು ಒಮ್ಮತದಿಂದ ಇಂಡಿಯಾ ಹೆಸರಿನಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂದು ಭಾಗಿಯಾಗಿದ್ದ ಪಕ್ಣಗಳು ಸೇರಿ ಇನ್ನಷ್ಡು ಪಕ್ಣಗಳ ಜೊತೆಗೂಡಿ ಒಗ್ಗೂಡಿ ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಜೊತೆಗೆ ವಿರೋದ ಪಕ್ಷಗಳ ಮೈತ್ರಿಕೂಡ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
