ಉದಯವಾಹಿನಿ , ವಿಶ್ವಸಂಸ್ಥೆ : ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ ವೇದಿಕೆಯ ಕೇಂದ್ರಕ್ಕೆ ತಂದಿತು.
ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಸೇರಿದಂತೆ ಹಲವು ಸದಸ್ಯ ರಾಷ್ಟ್ರಗಳ ಶಾಶ್ವತ ಪ್ರತಿನಿಧಿಗಳು ಹಾಗೂ ವಿಶ್ವಸಂಸ್ಥೆಯ ವಿವಿಧ ಸಂಸ್ಥೆಗಳು ಒಟ್ಟಾಗಿ ಸೇರಿ ಪ್ರಸ್ತುತ ಕಾಲದ ಜಾಗತಿಕ ಸಾಮಾಜಿಕ, ರಾಜಕೀಯ ಮತ್ತು ಮಾನಸಿಕ ಆರೋಗ್ಯಗಳ ಸವಾಲುಗಳಿಗೆ ಪರಿಹಾರಕ್ಕೆ ಪ್ರಾಚೀನ ಧ್ಯಾನ ಪದ್ಧತಿಯು ಹೇಗೆ ಸಹಾಯಕವೆಂದು ಚರ್ಚಿಸಿದರು. ಅಮೆರಿಕದ ನ್ಯೂಯಾರ್ಕ್​ನಲ್ಲಿನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎರಡನೇ ವಿಶ್ವ ಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ ‘ಜಾಗತಿಕ ಶಾಂತಿ ಮತ್ತು ಸೌಹಾರ್ದತೆಗಾಗಿ ಧ್ಯಾನ’ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಮತ್ತು ಅದರ ಅಂಗ ಸಂಸ್ಥೆಗಳು ಭಾಗವಹಿಸಿದ್ದವು. ಈ ವೇಳೆ ಜಾಗತಿಕ ಶಾಂತಿ, ಮಾನಸಿಕ ಸುಸ್ಥಿತಿ ಮತ್ತು ನಾಯಕತ್ವದಂತಹ ವಿಷಯಗಳಲ್ಲಿ ಧ್ಯಾನದ ಮಹತ್ತರವಾದ ಪಾತ್ರವನ್ನು ಗುರುತಿಸಲಾಯಿತು. ಈ ಸಂದರ್ಭದಲ್ಲಿ ಆರ್ಟ್​ ಆಫ್ ಲಿವಿಂಗ್​ನ ಸಂಸ್ಥಾಪಕ ಹಾಗೂ ಜಾಗತಿಕ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನ ಭಾಷಣ ಮಾಡಿದ್ದಾರೆ. ಧ್ಯಾನದ ಮಾರ್ಗದರ್ಶನವನ್ನು ನಡೆಸಿಕೊಡುವ ಮೂಲಕ, ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನ ಪದ್ಧತಿಯನ್ನು ವಿಶ್ವದ ಅತ್ಯಂತ ಮಹತ್ವದ ರಾಜತಾಂತ್ರಿಕ ವೇದಿಕೆಯ ಮೂಲಕ ಮುನ್ನೆಲೆಗೆ ತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!