ಉದಯವಾಹಿನಿ , ಚಾಮರಾಜನಗರ: ಇಲ್ಲಿನ ನಂಜೇದೇವನಪುರ ಗ್ರಾಮದ ಬಳಿ 5 ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಡ್ರೋನ್‌ನಲ್ಲೂ 5 ಹುಲಿಗಳು ಓಡಾಟ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಸಾಕಾನೆಗಳಿಂದಲೂ ಕೂಂಬಿಂಗ್‌ಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ತಿದೆ. ನಿಂತು ಹೋದ ಕ್ವಾರಿಗಳನ್ನೇ ಟೈಗರ್ ಆವಾಸ ಸ್ಥಾನ ಮಾಡಿಕೊಂಡಿದ್ದು, ಹುಲಿಗಳನ್ನ ಡ್ರೈವ್ ಮಾಡೋದು ಬೇಡ ಸೆರೆಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ. ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಹುಲಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಈ ಮಾಹಿತಿಯನ್ನ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
