ಉದಯವಾಹಿನಿ, ವೇಗದ ಬೌಲರ್ ಜಾಕೋಬ್ ಡಫಿ 2025ರ ಕ್ಯಾಲೆಂಡರ್ ವರ್ಷದಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ವರ್ಷ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 81 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಿಚರ್ಡ್ ಹ್ಯಾಡ್ಲಿ ಅವರ 40 ವರ್ಷದ ಹಳೆಯ ದಾಖಲೆಯನ್ನು ಮುರಿದಿದ್ದಾರೆ. 1985ರಲ್ಲಿ ನ್ಯೂಜಿಲೆಂಡ್ ಪರ ರಿಚರ್ಡ್ ಹ್ಯಾಡ್ಲಿ ಒಟ್ಟು 79 ವಿಕೆಟ್‌ಗಳನ್ನು ಕಬಳಿಸಿದರೆ, 2008 ರಲ್ಲಿ ಡೇನಿಯಲ್ ವೆಟ್ಟೋರಿ 76 ವಿಕೆಟ್‌ಗಳನ್ನು ಕಬಳಿಸಿದರು. ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಡಫಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿಯನ್ನು ಪಡೆಯುವ ಮೂಲಕ ರಿಚರ್ಡ್ ಹ್ಯಾಡ್ಲಿ ಮತ್ತು ಡೇನಿಯಲ್ ವೆಟ್ಟೋರಿ ಅವರ ದಾಖಲೆಗಳನ್ನು ಮುರಿದಿದ್ದಾರೆ.
31ರ ವಯಸ್ಸಿನ ಜಾಕೋಬ್ ಡಫಿ ಬೇ ಓವಲ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ನ ಮೊದಲ ಇನಿಂಗ್ಸ್‌ನಲ್ಲಿ 35 ಓವರ್‌ಗಳನ್ನು ಬೌಲ್ ಮಾಡಿ 86 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಬಳಿಸಿದರು. ಎರಡನೇ ಇನಿಂಗ್ಸ್‌ನಲ್ಲಿ ಅವರು 42 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದರು. ನ್ಯೂಜಿಲೆಂಡ್ ಈ ಪಂದ್ಯವನ್ನು 323 ರನ್‌ಗಳಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಜಾಕೋಬ್ ಡಫಿ ಒಟ್ಟು 23 ವಿಕೆಟ್‌ಗಳನ್ನು ಕಬಳಿಸಿದರು. ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದದ್ದ ಸರಣಿಯ ಮೊದಲ ಪಂದ್ಯದಲ್ಲಿ ಅವರು ಒಟ್ಟು 8 ವಿಕೆಟ್‌ಗಳನ್ನು ಕಿತ್ತಿದ್ದರು. ನಂತರ ವೆಲ್ಲಿಂಗ್ಟನ್‌ನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಅವರು ಒಟ್ಟು 6 ವಿಕೆಟ್‌ಗಳನ್ನು ಪಡೆದಿದ್ದರು.
