ಉದಯವಾಹಿನಿ, ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು (ಡಿ.25) ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಹೇಳಿದರು.
ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು. ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ ಮಾಡಲಿದ್ದೇವೆ. ಕೇಂದ್ರಕ್ಕೆ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಕುರಿತು ಗೌರವಾನ್ವಿತ ರಾಷ್ಟ್ರಪತಿಗಳ ಗಮನ ಸೆಳೆಯಲಿದ್ದೇವೆ ಎಂದರು.

Leave a Reply

Your email address will not be published. Required fields are marked *

error: Content is protected !!