ಉದಯವಾಹಿನಿ, ಬೆಂಗಳೂರು: ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಪಂದ್ಯ ನಡೆಸುವ ಸಂಬಂಧ ಸೋಮವಾರ ಬೆಂಗಳೂರು ಆಯುಕ್ತ ಸೀಮಂತ್‌ ಕುಮಾರ್‌, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಈ ತಂಡ ಸರ್ಕಾರಕ್ಕೆ ವರದಿ ನೀಡಿತ್ತು. ಅಂತಿಮವಾಗಿ ಬೆಂಗಳೂರು ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದಾರೆ.

ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಬಂದಿದೆ. ಜೊತೆಗೆ ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದೆ.ಸ್ಟೇಡಿಯಂ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಹೀಗಾಗಿ ನಾಳೆ ಮತ್ತಷ್ಟು ಅಭಿಮಾನಿಗಳು ಸೇರಿದರೆ ಕಷ್ಟ ಅನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಗೇಟ್ ಅಗಲೀಕರಣ ಮತ್ತು ಜನ ಒಡಾಡಲು ಅನುಕೂಲವಾಗುವ ವಾತಾವರಣವನ್ನು ಸ್ಟೇಡಿಯಂ ನಿರ್ಮಾಣ ಮಾಡದ ಕಾರಣ ಪೊಲೀಸರು ಪಂದ್ಯ ಆಯೋಜನೆಗೆ ಅನುಮತಿ ನೀಡಿಲ್ಲ. ಬುಧವಾರ ದೆಹಲಿ ಮತ್ತು ಆಂಧ್ರಪ್ರದೇಶದ ಮಧ್ಯೆ ಮೊದಲ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದೆಹಲಿ ಪರ ಕಣಕ್ಕೆ ಇಳಿಯಬೇಕಿತ್ತು.

 

Leave a Reply

Your email address will not be published. Required fields are marked *

error: Content is protected !!