ಉದಯವಾಹಿನಿ ಕುಶಾಲನಗರ : ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ೦೫ ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ೦೫ ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಜುಲೈ ಮಾಹೆಯಿಂದ ಪ್ರತಿ ಕೆ.ಜಿಗೆ ರೂ.೩೪ ರಂತೆ (34.5 ಕೆ.ಜಿ=170) 170ರೂ.ಗಳನ್ನು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.ಇನ್ನು 2 ಅಥವಾ 3 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದ್ದು, ಈಗಾಗಲೇ ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ ಎಂದು ಹೇಳಿದರು.ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಕೊಡಗು ಜಿಲ್ಲೆಯ 80,525 ಫಲಾನುಭವಿಗಳಿಗೆ ರೂ. ೪,೨೪,೬೭,೫೩೦ ಮೊತ್ತವನ್ನು ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.
ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಕುಟುಂಬಗಳು ನೇರ ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದ ಶರತ್ ಅವರು ಮಾಹಿತಿ ನೀಡಿದರು. ಡಿ.ಬಿ.ಟಿ ಮುಖಾಂತರ ಪಡಿತರ ಚೀಟಿ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡುವ ಯೋಜನೆ ಸಂಬAಧ ಒಟ್ಟು 12930ಡಿ.ಬಿ.ಟಿ ಫಲಾನುಭವಿಗಳ ಬ್ಯಾಂಕ್ ಖಾತೆಯು ಸ್ಥಿತಿಯಲ್ಲಿದ್ದು, ಇಂತಹ ಫಲಾನುಭವಿಗಳ ಪಟ್ಟಿಯನ್ನು ಸಂಬ0ಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ಈ ಪಟ್ಟಿಯಲ್ಲಿರುವ ಫಲಾನುಭವಿಗಳು ತುರ್ತಾಗಿ ತಮ್ಮ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
