ಉದಯವಾಹಿನಿ, ಉಡುಪಿ: ಮಲ್ಪೆ ಕಡಲ ತೀರದಲ್ಲಿ ಶ್ರೀಕೃಷ್ಣನ ವಿಗ್ರಹ ತೇಲಿ ಬಂದಿದೆ ಇದೊಂದು ದೊಡ್ಡ ಪವಾಡ ಎಂದು ಸಾವಿರಾರು ಜನ ಸಂಭ್ರಮಿಸುತ್ತಿದ್ದಾರೆ, ವಿಡಿಯೋವನ್ನು ವೈರಲ್ ಮಾಡುತ್ತಿದ್ದಾರೆ. ಉಡುಪಿಯ ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇತ್ತು. ಸಾವಿರಾರು ಜನ ಇಸ್ಕಾನ್ ಅನುಯಾಯಿಗಳು ಮಠಕ್ಕೆ ಬಂದಿದ್ದರು, ಸಂಜೆ ಮಲ್ಪೆ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕಡಲಲ್ಲಿ ತೇಲಿ ಬಂದು ದಡದಲ್ಲಿ ಸಿಕ್ಕ ವಿಗ್ರಹವೊಂದು ಎಲ್ಲರ ಗಮನ ಸೆಳೆಯಿತು. ಅಲ್ಲಿ ಸೇರಿದ್ದ ಸಾವಿರಾರು ಮಂದಿ ಆ ವಿಗ್ರಹವನ್ನು ಮೇಲಕ್ಕೆ ತೆಗೆದು ಸಂಭ್ರಮಿಸಿದರು.
ಉಡುಪಿಯ ಶ್ರೀಕೃಷ್ಣ ದೇವರು ಕೂಡ ಕಡಲಲ್ಲೇ ಲಭ್ಯವಾದ ಕಾರಣ, ಇಸ್ಕಾನ್ ಭಕ್ತರು ಅದೇ ಪವಾಡ ಮತ್ತೊಮ್ಮೆ ಸಂಭವಿಸಿದೆ ಎಂದು ಕುಣಿದು ಕುಪ್ಪಳಿಸಿದರು. ಅಲ್ಲಿ ಸೇರಿದ್ದ ಸಾವಿರಾರು ಇಸ್ಕಾನ್ ಭಕ್ತರು ಆ ವಿಗ್ರಹವನ್ನು ಕೃಷ್ಣನೆಂದೇ ಭಾವಿಸಿ ಇಲ್ಲಿಂದ ಬೆಂಗಳೂರಿಗೆ ಕೊಂಡೊಯ್ಯುತ್ತಿದ್ದಾರೆ. ಕರಾವಳಿ ಭಾಗದ ದೇಗುಲಗಳ ಪ್ರವೇಶ ದ್ವಾರದ ಬಳಿ ಇರುವ ಜಯ- ವಿಜಯರ ವಿಗ್ರಹ ಅನ್ನುವುದು ತಿಳಿದು ಬರುತ್ತದೆ.

ದ್ವಾರ ಪಾಲಕರಾಗಿ ದೇವಾಲಯದಲ್ಲಿ ಭಿನ್ನಗೊಂಡ (ಬಿರುಕಾದ) ವಿಗ್ರಹಗಳನ್ನು ಸಮುದ್ರಕ್ಕೋ ನದಿಗೋ ಬಿಡುವ ಪರಿಪಾಠ ಇದೆ. ಈ ರೀತಿ ಮುಳುಗಿಸಿ ಬಿಟ್ಟ ಜಯ- ವಿಜಯರ ವಿಗ್ರಹವೇ ತೇಲಿ ಬಂದು ಭಕ್ತರ ಸಂಭ್ರಮಕ್ಕೆ ಕಾರಣವಾಗಿದೆ. ಇದು ಕಡಲಲ್ಲಿ ತೇಲಿ ಬಂದ ಕೃಷ್ಣನ ವಿಗ್ರಹ ಎಂದು ಎಲ್ಲರೂ ಸಂಭ್ರಮಿಸಿ ಕುಣಿಯುವಂತಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!