ಉದಯವಾಹಿನಿ, ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡುವ ಮೂಲಕ ಕೇಂದ್ರದ ಬಿಜೆಪಿ (BJP) ಸರ್ಕಾರವು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರ ಹಾಗೂ ಭೂಹೀನರ ಅನ್ನ ಕಸಿಯುವ ಕುತಂತ್ರ ನಡೆಸಿದೆ ಎಂದು ಎಐಸಿಸಿ ಪರಿಶಿಷ್ಟ ಜಾತಿ ಘಟಕ (ಎಸ್‌ಸಿ) ಆಕ್ರೋಶ ವ್ಯಕ್ತಪಡಿಸಿದೆ.
ಎಐಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಪರಿಶಿಷ್ಟ ಜಾತಿ ಘಟಕದ ರಾಷ್ಟ್ರೀಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಎಸ್‌ಸಿ ಘಟಕದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಪಾಲ್ ಗೌತಮ್, ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್’ (ಗ್ರಾಮೀಣ್) (ಜಿ ರಾಮ್ ಜಿ) ಮಸೂದೆಯ ಮೂಲಕ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸ್ವಾಯತ್ತತೆಗೆ ಧಕ್ಕೆ ತಂದಿದೆ. ರಾಜ್ಯಗಳ ಮೇಲಿನ ಹೊರೆ ಹೆಚ್ಚಾಗಿದೆ. ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಕಿತ್ತು ಹಾಕುವ ಮೂಲಕ ಯೋಜನೆಯ ಆತ್ಮವನ್ನೇ ಕಿತ್ತು ಹಾಕಿದೆ’ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಚ್ಛತೆ ಕಾಪಾಡದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ
