ಉದಯವಾಹಿನಿ, ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ ಕ್ಷಣದಲ್ಲಿ ಅರೆಸ್ಟ್ ಮಾಡುವ ಸಾಧ್ಯತೆಯಿದೆ.
ಕಳೆದ ಐದು ದಿನಗಳಿಂದ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಮಹಾರಾಷ್ಟ್ರ ತಮಿಳುನಾಡು, ಗೋವಾದಲ್ಲಿ ಮೂರು ವಿಶೇಷ ತಂಡಗಳು ಹುಡುಕಾಟ ನಡೆಸಿವೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್‌ಗೆ ಕೋರ್ಟ್ ಶಾಕ್ ನೀಡಿದ್ದು, ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಸಿಐಡಿ ಅಧಿಕಾರಿಗಳ ಬಂಧನ ಭಯದ ನಡುವೆಯೇ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸೋದಾ ಅಥವಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಸೋದಾ ಅನ್ನೋದರ ಬಗ್ಗೆ ಚರ್ಚೆ ನಡೀತಿದೆ. ಈ ನಡುವೆ ಸಿಐಡಿ ಪೊಲೀಸರು ಬಂಧಿಸಲೇಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚಣೆ ನಡೆಸಿದ್ದಾರೆ
ಮಂಗಳವಾರ (ಡಿ.23) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿ ಅರ್ಜಿಯನ್ನು ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.
