ಉದಯವಾಹಿನಿ, ಪುಣೆ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಪರಿಣಾಮ ಮಹಾರಾಷ್ಟ್ರ ದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಅದರಲ್ಲೂ ಪುಣೆಯಲ್ಲಿ ರಾತ್ರಿ ಸಮಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗೃತೆ ವಹಿಸುವಂತೆ ಎಚ್ಚರಿಕೆ ನೀಡಿದೆ.
ಚಂಡಮಾರುತದ ಅಬ್ಬರವೂ ಮುಂದಿನ ಎರಡು ಮೂರು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ಉತ್ತರ ಒಡಿಶಾ ಹಾಗೂ ಪಶ್ಚಿಮ ಬಂಗಾಳ , ಜಾರ್ಖಾಂಡ್‌ನಲ್ಲಿ ಭಾರೀ ಮಳೆಯಾಗಲಿದೆ. ಇತ್ತ ತೆಲಂಗಾಣದ ಕೆಲವು ಭಾಗಗಳಾದ ಕೊಮಾರಂ ಭೀಮ್ ಆಸಿಫಾಬಾದ್, ನಿಜಾಮಾಬಾದ್, ಭದ್ರಾದ್ರಿ ಕೊತಗುಡೆಂ, ಖಮ್ಮಂ ಮತ್ತು ಇತರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಸದ್ಯ ವಾಣಿಜ್ಯ ನಗರಿ ಮುಂಬೈನಲ್ಲಿ ಮಳೆಯಾಗುತ್ತಿದ್ದು, ಈಗಾಗಲೇ ನಗರದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇತ್ತ ಅಸ್ಸಾಂ, ದೆಹಲಿ, ಹಿಮಾಚಲದಲ್ಲಿ ಮಳೆ ಮುಂದುವರೆದಿದ್ದು, ಇನ್ನು ಕೆಲ ದಿನಗಳ ಕಾಲ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!