ಉದಯವಾಹಿನಿ, ನವದೆಹಲಿ: ಕ್ರೈಸ್ತ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಕ್ರಿಸ್‌ಮಸ್‌ ಅನ್ನು ಇಂದು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಸಂತಸ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕ್ರಿಸ್‌ಮಸ್ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲದೆ, ಪ್ರೀತಿ, ಕರುಣೆ, ಶಾಂತಿ ಮತ್ತು ಮಾನವೀಯತೆಯ ಸಂಕೇತವಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಚರ್ಚ್‌ಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಪ್ರತಿ ವರ್ಷ ಡಿಸೆಂಬರ್ 25ರಂದು ಯೇಸುಕ್ರಿಸ್ತನ ಜನ್ಮದಿನದ ಹಿನ್ನೆಲೆಯಲ್ಲಿ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತದೆ. ಹಬ್ಬವು ಭರವಸೆ, ಶಾಂತಿ, ಕ್ಷಮೆ ಮತ್ತು ಪ್ರೀತಿಯ ವಿಚಾರಗಳೊಂದಿಗೆ ಸಂಬಂಧ ಹೊಂದಿದೆ. ಇದು ಕ್ರಿಶ್ಚಿಯನ್ ಧಾರ್ಮಿಕ ಹಬ್ಬವಾಗಿದ್ದರೂ, ಅದರ ಸಾರ್ವತ್ರಿಕ ಸಂದೇಶದಿಂದ ವೈವಿಧ್ಯಮಯ ಹಿನ್ನೆಲೆಯ ಜನರೂ ಸಹ ಜಾಗತಿಕವಾಗಿ ಆಚರಣೆ ಮಾಡುತ್ತಾರೆ. ಹಬ್ಬದ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು​ ತಮ್ಮ ಎಕ್ಸ್ ಸಂದೇಶದಲ್ಲಿ, ಯೇಸುಕ್ರಿಸ್ತ ತೋರಿಸಿದ ಮಾರ್ಗದ ಅನುಸರಣೆಗೆ, ದಯೆ ಮತ್ತು ಪರಸ್ಪರ ಸಾಮರಸ್ಯವನ್ನು ಉತ್ತೇಜಿಸುವ ಸಮಾಜ ನಿರ್ಮಿಸುವಂತೆ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!