ಉದಯವಾಹಿನಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್‌ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ `45′ ಸಿನಿಮಾ ಇಂದು (ಡಿ.25) ರಾಜ್ಯಾದ್ಯಂತ ತೆರೆಕಂಡಿದೆ. ತ್ರಿಮೂರ್ತಿಗಳ ಸಂಗಮವನ್ನ ತೆರೆಮೇಲೆ ಕಣ್ತುಂಬಿಕೊಂಡ ಅಭಿಮಾನಿಗಳು ಚಿತ್ರಮಂದಿರಲ್ಲಿ ಅದ್ದೂರಿ ಸೆಲಬ್ರೇಷನ್ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಾರಥ್ಯದಲ್ಲಿ ಮೂಡಿಬಂದ 45 ಚಿತ್ರಕ್ಕೆ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಮೂವರು ನಟರನ್ನ ಇಟ್ಟುಕೊಂಡು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ ನಿರ್ದೇಶಕ ಅರ್ಜುನ್ ಜನ್ಯ.
ಮೂವರು ನಟರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕಂಡು ಕೇಕೆ ಹಾಕಿ ಸಂಭ್ರಮಿಸಿದ್ದಾರೆ. ಟ್ರೈಲರ್ ಮೂಲಕ ಕ್ಯೂರಿಯಾಸಿಟಿ ಹೆಚ್ಚಿಸಿದ್ದ `45′ ಸಿನಿಮಾ ಪ್ರೇಕ್ಷಕರಿಗೆ ಮನರಂಜನೆ ಮಹಾಪೂರ ಹರಿಸಿದೆ. ಹೊಸ ರೀತಿಯ ಕಥೆಯನ್ನ ಹೊತ್ತುತಂದ `45′ ಸಿನಿಮಾ ಅಭಿಮಾನಿಗಳ ಮನಸ್ಸಿಗಿಳಿದಿದೆ. ಮೂವರು ನಟರು ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಗರದ ತ್ರಿವೇಣಿ ಚಿತ್ರಮಂದಿರಕ್ಕೆ ಆಗಮಿಸಿದ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಇಡೀ ಚಿತ್ರತಂಡ ಅಭಿಮಾನಿಗಳೊಟ್ಟಿಗೆ ಸಿನಿಮಾ ವೀಕ್ಷಿಸಿದೆ.
2025ರ ವರ್ಷಾಂತ್ಯಕ್ಕೆ ತೆರೆಕಂಡ `45′ ಸಿನಿಮಾಗೆ ಇಡೀ ಕರುನಾಡು ತೋಳು ಚಾಚಿ ಅಪ್ಪಿಕೊಂಡಿದೆ. ರಮೇಶ್ ರೆಡ್ಡಿ ಬಂಡವಾಳ ಹೂಡಿ ನಿರ್ಮಾಣ ಮಾಡಿದ ಈ ಸಿನಿಮಾ ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ತೆರೆಕಂಡ ಕಡೆಗಳಲ್ಲಿ ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.

Leave a Reply

Your email address will not be published. Required fields are marked *

error: Content is protected !!