ಉದಯವಾಹಿನಿ, ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ , ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ ಭವನದಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜನವರಿ 23 ರಂದು, ಬೆಂಗಳೂರಿನಲ್ಲಿ ಜನವರಿ 18 ರಂದು ಸಭೆ ಮಾಡ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಜೊತೆಗೆ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ 3 ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ ಅಂತ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ , ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. ಬಿಜೆಪಿಯನ್ನ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಂಕಲ್ಪ ಮಾಡಬೇಕಾಗಿದೆ. ರಾಜ್ಯಾಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!