ಉದಯವಾಹಿನಿ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಕ್ರಿಸ್‌ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನಗರದಲ್ಲಿರುವ ಮ್ಯಾಗ್ನೆಟೋ ಮಾಲ್‌ನಲ್ಲಿ ನಡೆದ ಈ ಘಟನೆಯ ಸಂಬಂಧ ಪೊಲೀಸರು 40 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಪೊಲೀಸರ ಮಾಹಿತಿಯಂತೆ, ಸಂಜೆ ಮಾಲ್ ಆವರಣಕ್ಕೆ ನುಗ್ಗಿದ ಗುಂಪೊಂದು ಕೋಲುಗಳು ಹಾಗೂ ಕಬ್ಬಿಣದ ರಾಡ್‌ಗಳೊಂದಿಗೆ ಕ್ರಿಸ್‌ಮಸ್ ಅಲಂಕಾರಗಳನ್ನು ಧ್ವಂಸ ಮಾಡಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪುಂಡರು ಮಾಲ್ ಒಳಗೆ ಹಾಗೂ ಹೊರಗೆ ಗಲಾಟೆ ನಡೆಸಿರುವುದು, ಭದ್ರತಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಸ್ಪಷ್ಟವಾಗಿ ದಾಖಲಾಗಿದೆ.
ಈ ಕುರಿತು ಮಾಲ್ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಸಿಸಿಟಿವಿ ದೃಶ್ಯಾವಳಿ, ವಾಹನ ಸಂಖ್ಯೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಮೂಲಕ ಗುರುತಿಸಲಾಗುತ್ತಿದೆ. ಶೀಘ್ರದಲ್ಲೇ ಬಂಧನ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
