ಉದಯವಾ
ಹಿನಿ, ಗುವಾಹಟಿ: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಘಟನೆಯನ್ನು ಬಾಲಿವುಡ್ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.ಮಹಿಳೆಯರ ಬೆತ್ತಲು ಮೆರವಣಿಗೆ ಮಾಡಿದವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಘೋರ ಶಿಕ್ಷೆಯಾಗಬೇಕು ಎಂದು ಬಾಲಿವುಡ್ ನಟ ನಟಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್ಮುಖ್, ಸೋನು ಸೂದ್, ವೀರದಾಸ್, ನಟಿಯರಾದ ಕಿಯಾರ ಆಡ್ವಾಣಿ, ಊರ್ಮಿಳಾ ಮಾತೋಡ್ಕರ್, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಹಲವಾರು ಬಾಲಿವುಡ್ ಮಂದಿ ಈ ಘಟನೆಯನ್ನು ಖಂಡಿಸಿದ್ದಾರೆ.
