ಉದಯವಾಹಿನಿ, ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ವಿರೋಧಿಸಿ ಜುಲೈ 27ರಂದು ಬಂದ್ ಗೆ ಕರೆ ನೀಡಲಾಗಿದ್ದು, ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದಾಗಿ ತಮ್ಮ ಆದಾಯಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದು ಹೀಗಾಗಿ ಇದನ್ನು ವಿರೋಧಿಸಿ ಆಟೋ, ಕ್ಯಾಬ್, ಖಾಸಗಿ ಬಸ್ ಚಾಲಕರು ಜುಲೈ 27ರಂದು ಬಂದ್ ಗೆ ಕರೆ ನೀಡಿದ್ದಾರೆ. ಜು.27 ರಂದು ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ ಮಾ
ಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ರಾಜ್ಯಾದ್ಯಂತ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಖಾಸಗಿ ಬಸ್ ಮಾಲೀಕರ ಸಂಘದ ಎಸ್. ನಟರಾಜ್ ಶರ್ಮಾ, ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಆಟೋ,ಕ್ಯಾಬ್, ಟ್ಯಾಕ್ಸಿ, ಓಲಾ,ಉಬರ್ ಹಾಗೂ ಖಾಸಗಿ ಬಸ್ ಸೇರಿದಂತೆ 23 ಸಂಘಟನೆಗಳ ಮುಖಂಡರಾದ ರಾಧಾಕೃಷ್ಣ ಹೊಳ್ಳ, ಜಿ. ನಾರಾಯಣ ಸ್ವಾಮಿ, ರಘು ನಾರಾಯಣಗೌಡ, ಎಂ. ಮಂಜುನಾಥ್, ಗಂಡಸಿ ಸದಾನಂದ ಸ್ವಾಮಿ ಭಾಗಿಯಾಗಿದ್ದರು.
