ಉದಯವಾಹಿನಿ, ನವದೆಹಲಿ: ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ ವ್ಯಾಖ್ಯಾನದ ಕುರಿತು ಇತ್ತೀಚೆಗೆ ಘೋಷಿಸಲಾದ ಹೊಸ ನಿಯಮಗಳ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಕೈಗೆತ್ತಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಇತರ ವಿಷಯಗಳ ಕುರಿತಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಅರಾವಳಿ ಬೆಟ್ಟಗಳು ಮತ್ತು ಪರ್ವತ ಶ್ರೇಣಿಗಳ ವ್ಯಾಖ್ಯಾನ ಮತ್ತು ಸಂಬಂಧಿತ ಸಮಸ್ಯೆಗಳು’ ಎಂದು ಪಟ್ಟಿ ಮಾಡಲಾದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
100 ಮೀಟರ್‌ಗಿಂತ ಕಡಿಮೆ ಎತ್ತರ ಹೊಂದಿರುವ ಅರಾವಳಿ ಪ್ರದೇಶದ ಪರ್ವತಗಳನ್ನು ಅರಣ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಆದೇಶದ ಬಳಿಕ ಜನರು ಭಾರೀ ಆಕ್ರೋಶವನ್ನು ಹೊರ ಹಾಕಿದ್ದಾರು. ಇದಾದ ಬಳಿಕ ಕೇಂದ್ರ ಸರ್ಕಾರ ಅರಾವಳಿ ಪರ್ವತಗಳ ಸಾಲಿನಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶ ಹೊರಡಿಸಿದೆ. ಸುಸ್ಥಿರ ಗಣಿಗಾರಿಕೆಗಾಗಿ ಸಮಗ್ರ ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸುವವರೆಗೆ ಸುಪ್ರೀಂಕೋರ್ಟ್, ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ ಈ ಆದೇಶ ಬಂದಿದೆ.

Leave a Reply

Your email address will not be published. Required fields are marked *

error: Content is protected !!