ಉದಯವಾಹಿನಿ, ತೈಪೆ: ತೈವಾನ್‌ನ ಈಶಾನ್ಯ ಕರಾವಳಿ ನಗರವಾದ ಯಿಲಾನ್‌ನಲ್ಲಿ ಶುಕ್ರವಾರ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.73 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇನ್ನೂ ಭೂಮಿ ಕಂಪಿಸಿದ ಹಿನ್ನೆಲೆ ರಾಜಧಾನಿ ತೈಪೆಯಲ್ಲಿ ಬೃಹತ್ ಕಟ್ಟಡಗಳು ನೆಲಕ್ಕುರುಳಿವೆ ಎಂದು ವರದಿಗಳು ತಿಳಿಸಿವೆ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ದೌಡಾಯಿಸಿದ್ದು, ಕಟ್ಟಡ ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇದರೊಂದಿಗೆ ಹಾನಿಯ ಪ್ರಮಾಣವನ್ನು ಅಂದಾಜು ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.
ಕಳೆದ ಬುಧವಾರ ತೈವಾನ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಈವಾರದಲ್ಲಿ ನಡೆದ 2ನೇ ಭೂಕಂಪ ಆಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಇನ್ನೂ 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಇದಕ್ಕೂ ಮುನ್ನ 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
