ಉದಯವಾಹಿನಿ, ಉಕ್ರೇನ್-ರಷ್ಯಾ ಯುದ್ಧ ಶಮನದ ಕುರಿತ ಮಹತ್ವದ ಮಾತುಕತೆಗೆ ಸಿದ್ಧತೆ ನಡೆಯುತ್ತಿರುವ ನಡುವೆಯೇ, ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ಭಾರೀ ದಾಳಿ ನಡೆಸಿದೆ. ಶನಿವಾರ ನಡೆದ ಈ ದಾಳಿಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾನೆಯಿಂದಲೇ ಕೈವ್‌ನ ಹಲವು ಪ್ರದೇಶಗಳಲ್ಲಿ ಪ್ರಬಲ ಸ್ಫೋಟಗಳು ಕೇಳಿಬಂದಿವೆ. ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಹೈಪರ್‌ಸಾನಿಕ್ ಶಸ್ತ್ರಾಸ್ತ್ರಗಳು ಹಾಗೂ ಡೋನ್‌ಗಳ ಮೂಲಕ ದಾಳಿ ನಡೆಸಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. ವಸತಿ ಪ್ರದೇಶಗಳು ಮತ್ತು ಪ್ರಮುಖ ಮೂಲಸೌಕರ್ಯಗಳಿಗೆ ಹಾನಿಯಾಗಿದೆ.
