ಉದಯವಾಹಿನಿ, ದಾವಣಗೆರೆ: ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಕಾಂಗ್ರೆಸ್ ಸಚಿವರ ಆಪ್ತರು ಅಂದರ್ ಆಗಿದ್ದಾರೆ.
ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಮೇಲೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಇತ್ತೀಚೆಗೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ಆಪ್ತ ವೇದಮೂರ್ತಿ ಸೇರಿ ನಾಲ್ವರು ಬಂಧನವಾಗಿತ್ತು. ಬಂಧಿತರಿಂದ 290 ಗ್ರಾಂ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
