ಉದಯವಾಹಿನಿ, ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಆಗ್ರಹಿಸಿದೆ. ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆಯೇ ಬುಡಮೇಲಾಗಿದೆ. ಅಸಮರ್ಥ ಗೃಹ ಸಚಿವ ಪರಮೇಶ್ವರ್ ಮೊದಲು ರಾಜೀನಾಮೆ ಕೊಟ್ಟು, ಕರ್ನಾಟಕ ಪೊಲೀಸ್ ಇಲಾಖೆಯ ಮರ್ಯಾದೆ ಉಳಿಸಿ ಎಂದಿದೆ.
ಎಕ್ಸ್‌ನಲ್ಲಿ ಏನಿದೆ?
ಕಾಂಗ್ರೆಸ್ ಸರ್ಕಾರದ ಅರಾಜಕತೆಯಿಂದ ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕ ಡ್ರಗ್ಸ್ ತವರೂರಾಗಿ ಬದಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ತಯಾರಿಕಾ ಘಟಕಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ವೈಫಲ್ಯವನ್ನು ಬೆತ್ತಲುಗೊಳಿಸಿದೆ.
